Breaking News

ಕಾರಿನ ಮಿರರ್ ಗೆ ಬೈಕ್ ಟಚ್ ಆಗಿದ್ದಕ್ಕೆ ಆಕ್ಸಿಡೆಂಟ್ ಮಾಡಿ ಬೈಕ್ ಸವಾರನ ಕೊಲೆ ಮಾಡಿದ ದಂಪತಿ

ಬೆಂಗಳೂರಿನಲ್ಲೊಂದು ಕ್ಷುಲ್ಲಕ ಕಾರಣಕ್ಕೆ ಭೀಕರ ಕೊಲೆ ನಡೆದಿದೆ. ಕಾರಿನ ಮಿರರ್ ಗೆ ಬೈಕ್ ಟಚ್ ಆಗಿದ ಕಾರಣಕ್ಕೆ ದಂಪತಿಗಳು ಬೈಕ್ ಸವಾರರ ಮೇಲೆ ಕಾರನ್ನು ಗುದ್ದಿಸಿ ಅಪಘಾತವೆಸಗಿ ಸಾಯಿಸಿದ ಘಟನೆ ಬೆಂಗಳೂರಿನ​ ಪುಟ್ಟೇನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.ದರ್ಶನ್ ಮತ್ತು ವರುಣ್ ಇಬ್ಬರೂ ಬೈಕ್‌ನಲ್ಲಿ ಹೋಗುತ್ತಿದ್ದಾಗ ಮುಂದೆ ಹೋಗುತ್ತಿದ್ದ ಕಾರಿನ ಮಿರರ್‌ಗೆ ಟಚ್‌ ಆಗಿದೆ. ಈ ವೇಳೆ ಮಿರರ್‌ ಒಡೆದಿದ್ದು, ಕಾರಿನಲ್ಲಿದ್ದ ಮನೋಜ್ ಕುಮಾರ್ ಮತ್ತು ಆರತಿ ಶರ್ಮ ದಂಪತಿ ಕೋಪಗೊಂಡು, ಸುಮಾರು ಎರಡು ಕಿಲೋಮೀಟರ್‌ನಷ್ಟು ಹಿಂಬಾಲಿಸಿ ಬೈಕ್‌ಗೆ ಗುದ್ದಿದ್ದಾರೆ ಎಂದು ತಿಳಿದುಬಂದಿದೆ. ಕಾರು ಡಿಕ್ಕಿಯಾದ ರಭಸಕ್ಕೆ ದರ್ಶನ್ ಮತ್ತು ವರುಣ್ ಇಬ್ಬರೂ ರಸ್ತೆಗುರುಳಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ದರ್ಶನ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಜೆಪಿ ನಗರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.

Share News

About BigTv News

Check Also

ದಲಿತ ಮಹಿಳೆಗೆ ಜಾತಿ ನಿಂದನೆ ಮಾಡಿ, ಲೈಂಗಿಕ ಕಿರುಕುಳ : ‘MSIL’ ಅಧಿಕಾರಿಗಳ ವಿರುದ್ಧ ದೂರು ದಾಖಲು!

ಬೆಂಗಳೂರು : ದಲಿತ ಮಹಿಳೆಯನ್ನು ಎಂಎಸ್‌ಐಎಲ್ ಅಧಿಕಾರಿಗಳು ಇದೀಗ ಅವಮಾನ ಮಾಡಿದ್ದಾರೆ. ಎಂಎಸ್‌ಐಎಲ್ ನಲ್ಲಿ ಕೆಲಸ ಮಾಡುತ್ತಿರುವ ದಲಿತ ಮಹಿಳೆಯ …

Leave a Reply

Your email address will not be published. Required fields are marked *