ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ತಮ್ಮ ಇಲೆಕ್ಟ್ರಿಕ್ ರಿಕ್ಷಾವನ್ನು ನಿಲ್ಲಿಸಿ ಚಾಲಕರೊಬ್ಬರು ಕಾಣೆಯಾಗಿರುವ ಘಟನೆ ವರದಿಯಾಗಿದೆ. ಘಟನೆ ನಡೆದ ಸ್ಥಳದ ಪರಿಸ್ಥಿತಿಯನ್ನು ಅವಲೋಕಿಸಿದ ಸ್ಥಳೀಯರು, ಅವರು ನೇತ್ರಾವತಿ ನದಿಗೆ ಹಾರಿರುವ ಸಾಧ್ಯತೆಯ ಬಗ್ಗೆ ತೀವ್ರ ಶಂಕೆ ವ್ಯಕ್ತಪಡಿಸಿದ್ದಾರೆ.ಘಟನೆಯ ಕುರಿತು ಮಾಹಿತಿ ಪಡೆದ ತಕ್ಷಣ, ಬಂಟ್ವಾಳ ನಗರ ಠಾಣಾ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ತಕ್ಷಣ ಸ್ಥಳಕ್ಕೆ ಧಾವಿಸಿ ಬಂದಿದ್ದಾರೆ. ಶಂಕೆಯ ಹಿನ್ನೆಲೆಯಲ್ಲಿ, ನೇತ್ರಾವತಿ ನದಿಯಲ್ಲಿ ಪ್ರೀತಂ ಲೋಬೋ ಅವರ ಪತ್ತೆಗಾಗಿ ಶೋಧ ಕಾರ್ಯವನ್ನು ತೀವ್ರಗೊಳಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

