Breaking News

ಶಿವಮೊಗ್ಗದಲ್ಲಿ ಬೆಳ್ಳಂ ಬೆಳಿಗ್ಗೆ ಭೀಕರ ಅಪಘಾತ : ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ಸಾವು!

ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಕ್ಕೆ ಗೂಡ್ಸ್ ವಾಹನ ಡಿಕ್ಕಿಯಾಗಿ ಸ್ಥಳದಲ್ಲಿ ಮೂವರು ಸಾವನಪ್ಪಿದ್ದಾರೆ. ಶಿವಮೊಗ್ಗದ ಗೊಂದಿ ಚಟ್ನಿಹಳ್ಳಿ ಗ್ರಾಮದ ಬಳಿ ಈ ಒಂದು ಘಟನೆ ನಡೆದಿದೆ. ಮೃತರನ್ನು ಅಸಾದುಲ್ಲ (35) ಸಾಧಿಕ್ (31) ಫೈರೋಜ್ (33) ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ.ನಿದ್ದೆ ಮಂಪರಿನಲ್ಲಿ ಗೂಡ್ಸ್ ವಾಹನ ಮರಕ್ಕೆ ಡಿಕ್ಕಿ ಹೊಡೆದಿದೆ. ಬಾಳೆಹೊನ್ನೂರಿನಲ್ಲಿ ಕಾರ್ಪೆಂಟರ್ ಕೆಲಸ ಮುಗಿಸಿ ಗೂಡ್ಸ್ ವಾಹನದಲ್ಲಿ ವಾಪಸ್ ಆಗುವ ವೇಳೆ ಈ ಒಂದು ಭೀಕರವಾದ ಅಪಘಾತ ಸಂಭವಿಸಿದೆ. ಅದೃಷ್ಟ ವಶಾಂತ್ ಚಾಲಕ ಪ್ರಣಾಪಯದಿಂದ ಪಾರಾಗಿದ್ದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಬೆಂಗಳೂರು | ಸಿಕ್ಕವರ ಮೇಲೆ ಮಚ್ಚು ಬೀಸಿದ ದುಷ್ಕರ್ಮಿಗಳು: ಎಂಟು ಮಂದಿಗೆ ಗಾಯ

ಬೆಂಗಳೂರು: ಮಾಸ್ಕ್ ಧರಿಸಿ ನಾಲ್ಕು ಬೈಕ್‌ಗಳಲ್ಲಿ ಬಂದಿದ್ದ ಎಂಟು ಮಂದಿ ದುಷ್ಕರ್ಮಿಗಳು ಉತ್ತರಹಳ್ಳಿ ಮುಖ್ಯರಸ್ತೆ ಹಾಗೂ ಅರಹಳ್ಳಿ ಗೇಟ್ ಬಳಿ …

Leave a Reply

Your email address will not be published. Required fields are marked *