Breaking News

ಗೋಂದಿ ಚಟ್ನಳ್ಳಿ ಬಳಿ ಭೀಕರ ಅಪಘಾತ: ದಾವಣಗೆರೆಯ ಓರ್ವ, ಉ.ಪ್ರದೇಶದ ಇಬ್ಬರು ಸಾವು

ಶಿವಮೊಗ್ಗ: ನಗರದ ಹೊರವಲಯದ ಗೋಂದಿ ಚಟ್ನಳ್ಳಿ ಗ್ರಾಮದ ಸಮೀಪ ಗುರುವಾರ (ಅ.30) ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನವೊಂದು ರಸ್ತೆ ಬದಿಯ ಮರಕ್ಕೆ ಅಪ್ಪಳಿಸಿದ ಪರಿಣಾಮ ಘಟನೆ ನಡೆದಿದೆ.ಶಿವಮೊಗ್ಗದಿಂದ ಹೊನ್ನಾಳಿ ಕಡೆಗೆ ಸಾಗುತ್ತಿದ್ದ ಅಶೋಕ್ ಲೈಲ್ಯಾಂಡ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ. ಘಟನೆಯಲ್ಲಿ ವಾಹನದಲ್ಲಿದ್ದ ಅಸಾದುಲ್ಲಾ (50 ವ), ಸಾದಿಕ್ (30 ವ), ಮತ್ತು ಫಿರೋಜ್ (22 ವ) ಮೃತಪಟ್ಟಿದ್ದಾರೆ. ಮೃತರ ಪೈಕಿ ಅಸಾದುಲ್ಲಾ ದಾವಣಗೆರೆ ಜಿಲ್ಲೆಯ ಚನ್ನಗಿರಿ ಮೂಲದವರಾಗಿದ್ದು, ಸಾದಿಕ್ ಮತ್ತು ಫಿರೋಜ್ ಉತ್ತರ ಪ್ರದೇಶದ ಕಾರ್ಮಿಕರು ಎಂದು ತಿಳಿದು ಬಂದಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *