ಡಿಕೇರಿ : ಲಕ್ಷಾಂತರ ರೂ . ಮೌಲ್ಯದ ಕಾಳು ಮೆಣಸು ಕಳ್ಳತನ ಆರೋಪದಡಿ ನಾಲ್ವರು ಆರೋಪಿಗಳನ್ನು ಮಾಲು ಸಹಿತ ಬಂಧಿಸುವಲ್ಲಿ ಸೋಮವಾರಪೇಟೆ ಪೊಲೀಸರು ಯಶಸ್ವಿಯಾಗಿದ್ದಾರೆ .ಸೋಮವಾರಪೇಟೆ ನಿವಾಸಿ ಸುಮಂತ್ , ಕಿಬೆಟ್ಟ ಗ್ರಾಮದ ಕೀರ್ತಿ , ಕೊಣನೂರು ಗ್ರಾಮದ ಮಣಿಕಂಠ ಹಾಗೂ ಕೆ . ಆರ್ . ಪೇಟೆಯ ನಿವಾಸಿ ಸಚಿನ್ ಬಂಧಿತ ಆರೋಪಿಗಳಾಗಿದ್ದಾರೆ .ಇತ್ತೀಚೆಗೆ ಕಾಳು ಮೆಣಸು ಕಳ್ಳತನದ ಎರಡು ಪ್ರತ್ಯೇಕ ಪ್ರಕರಣಗಳು ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು . ಪ್ರಕರಣದ ಕುರಿತು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಸಹಿತ 2.4 ಲಕ್ಷ ರೂ . ಮೌಲ್ಯದ 360 ಕೆ . ಜಿ ಕಾಳು ಮೆಣಸು ಮತ್ತು ಕಳ್ಳತನಕ್ಕೆ ಬಳಸಿದ್ದ ಗೂಡ್ಸ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ .
bigtvnews | Hubli Dharwad News | Kannada News | Karnataka News Hubli News | News In Hubli | Local news

