Breaking News

ಬಸ್ ಢಿಕ್ಕಿಯಾಗಿ ಯುವತಿಗೆ ಗಾಯ

ರಸ್ತೆ ದಾಟುತ್ತಿದ್ದ ಯುವತಿಯೋರ್ವಳಿಗೆ ಬಸ್ ಢಿಕ್ಕಿಯಾದ ಘಟನೆ ನಗರದ ಹಂಪನಕಟ್ಟೆ ಜಂಕ್ಷನ್ ಬಳಿ ಸಂಭವಿಸಿದೆ.ಯುಕ್ತಾ ಕೆ.ಎಸ್. (22) ಗಾಯಗೊಂಡವರು. ಸೋಮವಾರ ಬೆಳಗ್ಗೆ ಕೆಲಸದ ನಿಮಿತ್ತ ವಿಟ್ಲದಿಂದ ಬಸ್‌ನಲ್ಲಿ ಮಂಗಳೂರಿಗೆ ಬಂದು ಮಿಲಾಗ್ರಿಸ್ ನಿಲ್ದಾಣದಲ್ಲಿ ಬಳಿ ಇಳಿದು ಕೆ.ಎಸ್.ರಾವ್ ರಸ್ತೆ ಕಡೆಗೆ ಹೋಗಲೆಂದು ಹಂಪನಕಟ್ಟೆ ಜಂಕ್ಷನ್ ಬಳಿ ರಸ್ತೆ ದಾಟುತ್ತಿದ್ದಾಗ ಅಂಬೇಡ್ಕರ್ ಜಂಕ್ಷನ್ ಕಡೆಯಿಂದ ಸ್ಟೇಟ್‌ಬ್ಯಾಂಕ್ ಕಡೆಗೆ ಬರುತ್ತಿದ್ದ ಬಸ್ ಢಿಕ್ಕಿ ಹೊಡೆಯಿತು.ಯುಕ್ತಾ ಅವರು ಕಾಂಕ್ರೀಟ್ ರಸ್ತೆಗೆ ಬಿದ್ದು ಅವರ ಕಣ್ಣು ಹಾಗೂ ಭುಜದ ಬಳಿ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆಗೆ ಬಸ್ ಚಾಲಕನ ನಿರ್ಲಕ್ಷ್ಯದ ಚಾಲನೆ ಕಾರಣವೆಂದು ಮಂಗಳೂರು ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *