Breaking News

ಅನುಮಾನಾಸ್ಪದವಾಗಿ ಯುವಕ ಸಾವು

ಯುವಕನೊಬ್ಬ ಮಾವಿನ ಮರಕ್ಕೆ ನೇಣು ಬೀಗಿದ ಸ್ಥಿತಿಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತಾಲೂಕಿನ ಬಂಡಪಲ್ಲಿ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸಪುರ ತಾಲೂಕು ಆರಿಕುಂಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಂಡಪಲ್ಲಿ ಗ್ರಾಮದ ಮಾವಿನ ತೋಟದಲ್ಲಿನ ಮಾವಿನ ಮರಕ್ಕೆ ನೇಣು ಹಾಕಿಕೊಂಡಿರುವುದು ಕಂಡು ಬಂದಿದೆ.ಮೃತ ಯುವಕ ಚಿಂತಾಮಣಿ ತಾಲೂಕು ಗಂಡ್ರಗಾನಹಳ್ಳಿ ಗ್ರಾಮದ ಆದರ್ಶ(33) ಟ್ರ್ಯಾಕ್ಟರ್ ಚಾಲಕನಾಗಿ ಕೆಲಸ ಮಾಡುತ್ತಿದ್ದನೆಂದು ತಿಳಿದು ಬಂದಿದೆ.ಸಂಬಂಧಿಸಿದಂತೆ ನೇಣು ಹಾಕಿಕೊಂಡಿರುವ ಯುವಕನ ಮೃತದೇಹ ಭೂಮಿಗೆ ಸ್ಪರ್ಶವಾಗಿರುವ ಕಾರಣ ಮೃತನ ಪೋಷಕರು ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಆದರೆ, ಇದು ಕೊಲೆಯೋ, ಆತ್ಮಹತ್ಯೆಯೋ ಪೊಲೀಸರು ನಡೆಸುವ ತನಿಖೆಯಿಂದ ಸತ್ಯಾಂಶ ಹೊರಬರಬೇಕಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *