Breaking News

ಅಕ್ರಮ ಲಕ್ಕಿ ಸ್ಕೀಂ; ಪ್ರಕರಣ ದಾಖಲು

ಕರಪತ್ರಗಳ ಮೂಲಕ ಪ್ರಚಾರ ಮಾಡಿ ಅಕ್ರಮವಾಗಿ ಲಕ್ಕಿಸ್ಕೀಂ ಮಾಡುತ್ತಿರುವ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದ ಪುತ್ತೂರು ನಗರ ಪೊಲೀಸರು ಬಿಗ್ ಟಿಕೆಟ್ ಲಕ್ಕಿ ಸ್ಕೀಂ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಪೊಲೀಸರು ಗಸ್ತು ನಿರತರಾಗಿದ್ದ ಸಂದರ್ಭದಲ್ಲಿ ಸಾರ್ವಜನಿಕರು ಕರಪತ್ರ ಹಿಡಿದು ಚರ್ಚಿಸುತ್ತಿರುವುದನ್ನು ಗಮನಿಸಿ ಈ ಬಗ್ಗೆ ಮಾಹಿತಿ ಕಲೆ ಹಾಕಿದರು.ಉಕ್ಕಿನಡ್ಕದ ಮೊಹಮ್ಮದ್ ಶಫೀಕ್, ಪುತ್ತೂರಿನ ಶರೀಫ್, ಆಶೀಕ್ ಎಂಬವರು ಜತೆಗೂಡಿ ನಡೆಸುತ್ತಿರುವ ಅಕ್ರಮ ಸ್ಕೀಂ ಇದಾಗಿದ್ದು, ಗ್ರಾಹಕರಿಂದ 1 ಸಾವಿರ ರೂ. ಸಂಗ್ರಹಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದು ನಾಲ್ವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Share News

About BigTv News

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *