ಕೋಟ್ಯಂತರ ಮೌಲ್ಯದ ಆಸ್ತಿ ಬರೆದುಕೊಟ್ಟು ಮಗಳಂತೆ ಸಾಕಿದ್ದವರ ಮನೆಗೆ ಯುವತಿ ಕನ್ನ ಹಾಕಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಉಂಡ ಮನೆಗೆ ಕನ್ನ ಹಾಕಿದ ಮನೆಗೆಲಸದಾಕೆಯನ್ನು ಪೊಲೀಸರು ಬಂಧಿಸಿದ್ದಾರೆ.ದೀಪಾವಳಿ ಹಬ್ಬಕ್ಕೆ ಚಿನ್ನ ಹಾಕಿಕೊಳ್ಳಲು ಡೂಪ್ಲಿಕೇಟ್ ಕೀ ಮೂಲಕ ಬೀರು ತೆಗೆಸಿದಿದ್ದರು. ಈ ವೇಳೆ ಚಿನ್ನ ಕಳ್ಳತನ ಆಗಿರೋದು ಬೆಳಕಿಗೆ ಬಂದಿದೆ. ಮಂಗಳ 450 ಗ್ರಾಂ ಚಿನ್ನ ಹಾಗೂ 3 ಕೆಜಿ ಬೆಳ್ಳಿ ಕಳ್ಳತನ ಮಾಡಿ ಅಡಮಾನ ಇಟ್ಟಿದ್ಳು. ಆ ಹಣವನ್ನೂ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ಕಳೆದಿದ್ದಳು.ಪೊಲೀಸರು ಮಂಗಳ ಸಿಡಿಆರ್ ಪರಿಶೀಲನೆ ನಡೆಸಿದರು. ಈ ವೇಳೆ ಚಿನ್ನ ಅಡಮಾನ ಇಟ್ಟಿದ್ದ ಮೆಸೇಜ್ ಗೊತ್ತಾಗಿದೆ. ಆಕೆಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತಪ್ಪೊಪ್ಪಿಕೊಂಡಿದ್ದಾಳೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಾಗಲೂ ಆಕೆಯನ್ನ ಬಿಟ್ಟುಬಿಡಿ ಎಂದು ಕೇಳಿಕೊಂಡಿದ್ದರು ಮನೆ ಮಾಲೀಕೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

