Breaking News

ತಾಯಿಯ ಚಿನ್ನ ಕದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಸ್ನೇಹಿತನ ಹತ್ಯೆ!!

ತನ್ನ ತಾಯಿಯ ಚಿನ್ನ ಕದ್ದಿದ್ದನ್ನು ಪ್ರಶ್ನಿಸಿದ್ದಕ್ಕೆ ಚಾಕುವಿನಿಂದ ಇರಿದು ಸ್ನೇಹಿತನ ಹತ್ಯೆ ಮಾಡಿರುವಂತಹ ಘಟನೆ ಬೆಂಗಳೂರಿನ ಕೋಣನಕುಂಟೆಯ ಕೃಷ್ಣಪ್ಪ ಲೇಔಟ್​ನಲ್ಲಿ ಅಕ್ಟೋಬರ್ 25ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ರಾಹುಲ್​​ನನ್ನು​, ಪ್ರೀತಮ್ ಕೊಲೆ ಮಾಡಿದ್ದಾರೆ. ಸದ್ಯ ​ಆರೋಪಿ ಪ್ರೀತಮ್​ನನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.ಕಳೆದ ಶನಿವಾರ ಪ್ರೀತಮ್ ಬ್ಯಾಗ್​ನಲ್ಲೇ ರಾಹುಲ್ ಚಿನ್ನ ನೋಡಿದ್ದ. ನಿನ್ನ ಮಗ ಚಿನ್ನ ಕದ್ದಿದ್ದು ಎಂದು ಪ್ರೀತಮ್ ತಾಯಿಗೆ ರಾಹುಲ್ ಹೇಳಿದ್ದ. ಇದರಿಂದ ಕೋಪಗೊಂಡು ಚಾಕುವಿನಿಂದ ಇರಿದು ರಾಹುಲ್​ನ ಕೊಲೆ ಮಾಡಲಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *