Breaking News

ಪತಿಯ ಕಿರುಕುಳಕ್ಕೆ ಆತ್ಮಹತ್ಯೆಗೆ ಶರಣಾದ ಮಹಿಳೆ: ಶವ ಆಸ್ಪತ್ರೆಯಲ್ಲಿಟ್ಟು ಪರಾರಿಯಾದ ಕುಟುಂಬ

ಪತಿ ಹಾಗೂ ಕುಟುಂಬದವರ ಕಿರುಕುಳಕ್ಕೆ ಬೇಸತ್ತ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆಯ ಶವವನ್ನು ಆಸ್ಪತ್ರೆಯಲ್ಲಿಟ್ಟು ಕುಟುಂಬದವರು ಪರಾರುಯಾಗಿರುವ ಘಟನೆ ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಕೋಣಂದೂರಿನಲ್ಲಿ ನಡೆದಿದೆ.ಪೂಜಾ ಮೃತ ಮಹಿಳೆ. ಮೂರು ವರ್ಷಗಳ ಹಿಂದೆ ಮಾವಿನಕೆರೆ ಶೆಟ್ಟಿಕೊಪ್ಪದ ಶರತ್ ಜೊತೆ ಪೂಜಾ ವಿವಾಹವಾಗಿತ್ತು.ದಂಪತಿಗೆ ಎರಡು ವರ್ಷದ ಮಗನಿದ್ದಾನೆ. ಆದರೂ ಪತಿ ಹಾಗೂ ಅತ್ತೆ-ಮಾವ, ನಾದಿನಿ ಪೂಜಾಳಿಗೆ ಕಿರುಕುಳ ನೀಡುತ್ತಿದ್ದರಂತೆ. ಇದರಿಂದ ನೊಂದ ಪೂಜಾ ತವರು ಮನೆಗೆ ಬಂದು ಕಣ್ಣೀರಿಟ್ಟಿದ್ದಳು. ಆಕೆಯನ್ನು ತವರಿನವರು ಸಮಾಧಾನ ಮಾಡಿ ಕಳುಹಿಸಿದ್ದರು.ಮನೆಗೆ ಹಿಂತಿರುಗಿದ ಬಳಿಕ ಮತ್ತದೇ ರಾಗ ಎಂಬತ್ತೆ ಕಿರುಕುಳ, ಹಿಂಸೆ ಮುಂದುವರೆದಿದೆ. ಇದರಿಂದ ಬೇಸತ್ತ ಪೂಜಾ ಕ್ರಿಮಿನಾಶಕ ಸೇವಿಸಿದ್ದಳು. ಆಕೆಯನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಪೂಜಾ ಸಾವನ್ನಪ್ಪಿದ್ದಾಳೆ. ಪೂಜಾ ಮೃತಪಟ್ಟ ಸುದ್ದಿ ತಿಳಿಯುತ್ತಿದ್ದಂತೆ ಆಸ್ಪತ್ರೆಯಲ್ಲಿಯೇ ಪೂಜಾ ಶವ ಬಿಟ್ಟು ಪತಿ ಹಾಗೂ ಕುಟುಂಬದವರು ಎಸ್ಕೇಪ್ ಆಗಿದ್ದಾರೆ.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *