ಮೈಕ್ರೋ ಫೈನಾನ್ಸ್ ಸಾಲ ಮರು ಪಾವತಿಸದ ರೈತನ ಮನೆ ಜಪ್ತಿ ಮಾಡಲಾಗಿದ್ದು,ಸಾಲದ ಕಂತು ಕಟ್ಟಿಲ್ಲ ಎಂದು ಖಾಸಗಿ ಫೈನಾನ್ಸ್ ಸಿಬ್ಬಂದಿ ಮನೆ ಜಪ್ತಿ ಮಾಡಿದ್ದಾರೆ.ನಂಜನಗೂಡು ತಾಲ್ಲೂಕಿನ ಕಂದೇಗಾಲ ಗ್ರಾಮದಲ್ಲಿ ಘಟನೆ ನಡೆದಿದ್ದು,ಕಾಲಾವಕಾಶ ಕೋರಿದ್ದರೂ ಸ್ಪಂದಿಸದ ಫೈನಾನ್ಸ್ ಸಿಬ್ಬಂದಿ ನ್ಯಾಯಾಲಯದ ಆದೇಶ ತಂದು ಜಪ್ತಿ ಮಾಡಿದ್ದಾರೆ.ಮನೆ ನಿರ್ಮಾಣಕ್ಕೆ 2.70 ಲಕ್ಷ ಸಾಲವನ್ನು ಇಕ್ವೀಟಾಸ್ ಸ್ಮಾಲ್ ಫೈನಾನ್ಸ್ ನಲ್ಲಿ ಕುಟುಂಬ ಪಡೆದಿತ್ತು. ಸಾಲ ಪಡೆದಿದ್ದ ಚಿನ್ನಸ್ವಾಮಿ ಈಗಾಗಲೆ 19 ಕಂತುಗಳ 1,89,000 ಸಾಲ ಮರು ಪಾವತಿಸಿದ್ದಾರೆ. ಚಿನ್ನಸ್ವಾಮಿ ಪತ್ನಿ ಸಹ ಇಕ್ವೀಟಾಸ್ ಫೈನಾನ್ಸ್ ನಲ್ಲಿ ಗುಂಪು ಸಾಲ ಪಡೆದಿದ್ದರು.ಮನೆ ಸಾಲವನ್ನ ಗುಂಪು ಸಾಲಕ್ಕೆ ವಜಾ ಮಾಡಿಕೊಂಡಿದ್ದಾರೆಂದು ಕುಟುಂಬ ಆರೋಪಿಸಿದೆ.ಸಾಲ ಮರುಪಾವತಿಗಾಗಿ ತಹಸೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಪತ್ರ ಕಾಲಾವಕಾಶ ಕೋರಿದರೂ ಮನೆ ಜಪ್ತಿ ಮಾಡಿದ್ದಾರೆಂದು ಆರೋಪಿಸಲಾಗಿದೆ. ಸದ್ಯ ಸಂಬಂಧಪಟ್ಟ ಪೊಲೀಸ್ ಹಿರಿಯ ಅಧಿಕಾರಿಗಳು ಈ ಬಗ್ಗೆ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಳ್ಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

