Breaking News

ಪೊಲೀಸರಿಂದ ಹಲ್ಲೆ ಆರೋಪ, ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆ ಯತ್ನ

ಪೊಲೀಸರಿಂದ ಹಲ್ಲೆಗೊಳಗಾದ ಯುವಕ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ನೇಣು ಹಾಕಿಕೊಂಡು ಯುವಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕು ಸಂತೆಬೆನ್ನೂರು ಸಮೀಪದ ಚಿಕ್ಕಬೆನ್ನೂರಿನಲ್ಲಿ ನಡೆದಿದೆ.24 ವರ್ಷದ ಕಿರಣ್ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ ಯುವಕ.ಕಳ್ಳತನ ಪ್ರಕರಣವೊಂದರ ವಿಚಾರಣೆಗಾಗಿ ಆತನನ್ನು ಪೊಲೀಸರು ಅಕ್ಟೋಬರ್ 27 ರಂದು ಠಾಣೆಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರ ಹಿಂಸೆಯಿಂದ ಬೇಸತ್ತು ಕಿರಣ್ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಸಂತೆಬೆನ್ನೂರು ಪೊಲೀಸರ ವಿರುದ್ಧ ಆತನ ಕುಟುಂಬದವರು ಆರೋಪಿಸಿದ್ದಾರೆ.

Share News

About BigTv News

Check Also

ವಿಜಯಪುರದಲ್ಲಿ ಮತ್ತೆ ಹರಿದ ನೆತ್ತರು, ಪತ್ನಿಯ ಎದುರಲ್ಲೇ ಅಮಾನುಷವಾಗಿ ಪತಿಯ ಜೀವ ತೆಗೆದ ರಾಕ್ಷಸರು

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಎದುರು ಯಾಸೀನ್ ಠಕ್ಕೆ ಎಂಬಾತನ ಮೇಲೆ ದುಷ್ಕರ್ಮಿಗಳು ಎರಡು ಸುತ್ತು ಗುಂಡು ಹಾರಿಸಿ ಹತ್ಯೆ …

Leave a Reply

Your email address will not be published. Required fields are marked *