Breaking News

ಕಲಬುರಗಿ, ವಿಜಯಪುರ ಜಿಲ್ಲೆಯಲ್ಲಿ ಸರಣಿ ಭೂಕಂಪನಕ್ಕೆ ಬೆಚ್ಚಿಬಿದ್ದ ಜನ

ಕಲಬುರಗಿ ಜಿಲ್ಲೆಯಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಚಿಂಚೋಳಿ ತಾಲೂಕಿನ ಐನಾಪುರ, ಗಡಿನಿಂಗದಹಳ್ಳಿ, ಸೊಂತ, ಪಟವಾದ ಗ್ರಾಮದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದೆ. ನಸುಕಿನ ಜಾವ, ಮಧ್ಯಾಹ್ನ, ಸಂಜೆ ಭೂಮಿ ಕಂಪಿಸಿದೆ.ಪದೇ ಪದೇ ಭೂಕಂಪನ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.ಅದೇ ರೀತಿ ವಿಜಯಪುರ ಸುತ್ತಮುತ್ತ ಮತ್ತೆ ಭೂಕಂಪನದ ಅನುಭವವಾಗಿದೆ. ರಾತ್ರಿ 10 ಗಂಟೆ 5 ನಿಮಿಷದ ಸುಮಾರಿಗೆ ಎರಡು ಬಾರಿ ಭೂಮಿ ಕಂಪಿಸಿದೆ. ಎರಡು ತಿಂಗಳಲ್ಲಿ ಬರೋಬ್ಬರಿ 12 ಬಾರಿ ಭೂಮಿ ಕಂಪಿಸಿದೆ. ಪದೇ ಪದೇ ಸರಣಿ ಭೂಕಂಪಕ್ಕೆ ಜನ ಬೆಚ್ಚಿಬಿದ್ದಿದ್ದಾರೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *