Breaking News

ಬೆಂಗಳೂರಲ್ಲಿ ಅನುಮಾನಾಸ್ಪದವಾಗಿ ಸಾವು ಕಂಡ ಯುವತಿ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉದ್ಯಾನನಗರಿ ಬೆಂಗಳೂರಿನಲ್ಲಿ 25 ವರ್ಷದ ಯುವತಿ ಅನುಮಾನಾಸ್ಪದವಾಗಿ ಸಾವು ಕಂಡಿದ್ದಾಳೆ. ಆಕೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯನ್ನು ದಾವಣಗೆರೆ ಮೂಲದ ಸುಪ್ರಿಯಾ ಎಂದು ಗುರುತಿಸಲಾಗಿದೆ.ಎಂಬಿಎ ವ್ಯಾಸಂಗ ಮಾಡಿದ್ದ ಸುಪ್ರಿಯಾ ಬೈಕ್‌ ರೈಡಿಂಗ್‌ ತರಬೇತಿ ಪಡೆದುಕೊಳ್ಳುತ್ತಿದ್ದರು ಎನ್ನಲಾಗಿದೆ.ಗಾಯತ್ರಿನಗರದ ರೈಲ್ವೆ ಪ್ಯಾರಲಲ್‌ ರಸ್ತೆಯಲ್ಲಿ ಬಾಡಿಗೆ ಮನೆಯಲ್ಲಿ ಸುಪ್ರಿಯಾ ವಾಸವಿದ್ದರು. ಕಳೆದ ಎರಡು ದಿನಗಳಿಂದ ಆಕೆ ವಾಸವಾಗಿದ್ದ ರೂಮ್‌ ಲಾಕ್‌ ಆಗಿತ್ತು. ಈ ಬಗ್ಗೆ ಅನುಮಾನಗೊಂಡ ಮನೆಯ ಮಾಲೀಕ ಬಾಗಿಲು ಓಪನ್‌ ಮಾಡಿದ್ದಾಗ ಘಟನೆ ಬೆಳಕಿಗೆ ಬಂದಿದೆ.ಸುಬ್ರಹ್ಮಣ್ಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಮರಣೋತ್ತರ ಪರೀಕ್ಷೆಗಾಗಿ ಶವವನ್ನು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸದ್ಯ ಪ್ರಕರಣದ ಬಗ್ಗೆ ಯುಡಿಆರ್‌ ಕೇಸ್‌ ದಾಖಲಿಸಿಕೊಂಡಿರುವ ಸುಬ್ರಹ್ಮಣ್ಯ ನಗರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *