Breaking News

ರಾಜ್ಯೋತ್ಸವ ಮೆರವಣಿಗೆ ವೇಳೆ ಐವರಿಗೆ ಯದ್ವಾತದ್ವಾ ಚಾಕು ಇರಿತ!!

ರಾಜ್ಯೋತ್ಸವದ ಸಂಭ್ರಮದಲ್ಲಿರುವಾಗಲೇ ಗಡಿ ನಾಡು ಬೆಳಗಾವಿಯಲ್ಲಿ ಆಘಾತಕಾರಿ ಘಟನೆ ನಡೆದಿದೆ. ಬೆಳಗಾವಿಯಲ್ಲಿ ರಾಜ್ಯೋತ್ಸವ ಮೆರವಣಿಗೆ ನಡೆಯುವಾಗ ಐವರಿಗೆ ಚಾಕು ಇರಿಯಲಾಗಿದೆ. ಇವರನ್ನು ಸ್ಥಳೀಯ ಬಿಮ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ.ಬೆಳಗಾವಿಯ ಸದಾಶಿವ ನಗರದ ಲಕ್ಷ್ಮೀ ‌ಕಾಂಪ್ಲೆಕ್ಸ್‌ ಬಳಿ ಘಟನೆ ನಡೆದಿದೆ. ರಾಜ್ಯೋತ್ಸವ ಅಂಗವಾಗಿ ರೂಪಕಗಳ ಮೆರವಣಿಗೆ ನಡೆಯುತ್ತಿತ್ತು. ಈ ಮೆರವಣೆಗೆ ಗುಂಪಿನಲ್ಲಿ ಏಕಾಏಕಿ ಬಂದ ದುಷ್ಕರ್ಮಿಗಳು ಯದ್ವತದ್ವಾ ಚಾಕು ಇರಿದು ಪರಾರಿಯಾಗಿದ್ದಾರೆ. ಚಾಕು,ಜಂಬೆ ಸಮೇತ ಆಗಮಿಸಿ ಐವರ ಮೇಲೆ ದಾಳಿ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *