Breaking News

10 ದಿನ & 2 ವರ್ಷದ ಮಗಳನ್ನು ಕೊಂದು ಪ್ರಾಣ ಬಿಟ್ಟ ಬಾಣಂತಿ.

ಗ್ರಾಮದ ಮುಸ್ಲಿಂ ಬ್ಲಾಕ್ ನ ಜಮೃದ್ ಪಾಷಾ ಎಂಬವರ ಪುತ್ರಿ ಅರೇಬಿಯಾ (22) ತನ್ನ ರೂಮಿನ ಬಾಗಿಲನ್ನು ಹಾಕಿಕೊಂಡು ತನ್ನ ಹತ್ತು ದಿನದ ಹೆಣ್ಣು ಮಗು ಹಾಗೂ ಎರಡು ವರ್ಷದ ಅನಾಮ ಎಂಬ ಹೆಣ್ಣು ಮಗುವಿನ ಕತ್ತನ್ನು ಕೊಯ್ದು ಕೊಲೆ ಮಾಡಿ, ನಂತರ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾರೆ.ಸುದ್ದಿ ತಿಳಿದು ತಂದೆ ರೂಮಿನ ಬಾಗಿಲನ್ನು ಒಡೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಜಮೃದ್ ಪಾಷಾ ಪಿರಿಯಾಪಟ್ಟಣ ತಾಲೂಕಿನ ಅರೇಹಳ್ಳಿ ಗ್ರಾಮಕ್ಕೆ ಅಕ್ಕ ಕುತೇಜ್ ಅವರ ಮಗನಾದ ಮುಸಬಿರ್ ಎಂಬಾತನಿಗೆ ಕಳೆದ ಮೂರು ವರ್ಷಗಳ ಹಿಂದೆ ಮದುವೆ ಮಾಡಿಕೊಡಲಾಗಿತ್ತು, ಮೊದಲನೆಯ ಮಗು ಹೆಣ್ಣು ಆಗಿದ್ದು, ಎರಡನೇ ಮಗು ಕಳೆದ ಹತ್ತು ದಿನಗಳ ಹಿಂದೆ ಪಿರಿಯಾಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *