ತಾಲ್ಲೂಕಿನ ಮಾದನ ಹಿಪ್ಪರಗಿ ಗ್ರಾಮದಲ್ಲಿ ಮನೆ ಮುಂದೆ ಆಟ ಆಡುತ್ತಿದ್ದ ಮೂರು ವರ್ಷದ ಬಾಲಕಿ ಚರಂಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ಮಾದನ ಹಿಪ್ಪರಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಶಿವಲಿಂಗಪ್ಪ ಇಂಗಳೆ ಅವರ ಮಗಳು ಶ್ರಾವಣಿ (3) ಮೃತಳು. ಮನೆ ಮುಂದೆ ಮಗು ಆಟವಾಡುತ್ತಿತ್ತು. ಮಗುವಿನ ಸಪ್ಪಳ ಕೇಳದಿದ್ದಾಗ ಹುಡುಕಾಡಿದ್ದು, ಮುಖ್ಯ ರಸ್ತೆಗೆ ನಿರ್ಮಿಸಿದ್ದ ಚರಂಡಿಯಲ್ಲಿ ಮಗುವಿನ ಶವ ಕಂಡುಬಂದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

