ಸುಪ್ರೀಂ ಕೋರ್ಟ್‌ನಲ್ಲಿ ಆರೋಪಿಗಳ ಜಾಮೀನು ರದ್ದಾಗಿತ್ತು. ಆಗಸ್ಟ್ 14ರಂದು ದರ್ಶನ್, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳೆಲ್ಲಾ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ದರ್ಶನ್ ತೂಕ ಕಳೆದುಕೊಂಡು ತೆಳ್ಳಗಾಗಿದ್ದಾರೆ, ಸರಿಯಾದ ಸೌಲಭ್ಯ ಇಲ್ಲದೇ ಕಂಗೆಟ್ಟಿದ್ದಾರೆ ಅಂತ ಸುದ್ದಿ ಆಗಿತ್ತು.ಅಂತೂ ಇಂತೂ 81 ದಿನಗಳ ಬಳಿಕ ಕೋರ್ಟ್ ವಿಚಾರಣೆಗಾಗಿ ದರ್ಶನ್ ಜೈಲಿನಿಂದ ಹೊರ ಬಂದಿದ್ದಾರೆ.
ಬೆಂಗಳೂರಿನ 64ನೇ ಸಿಸಿಹೆಚ್ ಕೋರ್ಟ್ ವಿಚಾರಣೆಗಾಗಿ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬರಲಾಗಿತ್ತು. ಎಲ್ಲಾ 17 ಆರೋಪಿಗಳು ಕೋರ್ಟ್‌ಗೆ ಹಾಜರಾಗಬೇಕು ಎಂದು ಸೂಚಿಸಲಾಗಿತ್ತು. ದೋಷಾರೋಪ ಪ್ರಕ್ರಿಯೆ ವಿಚಾರಣೆಗಾಗಿ ಕರೆದುಕೊಂಡು ಬರಲಾಗಿತ್ತು. ಎರಡೂವರೆ ತಿಂಗಳ ಬಳಿಕ ದರ್ಶನ್ ಕ್ಯಾಮರಾ ಕಣ್ಣಿಗೆ ಬಿದ್ದಿದ್ದಾರೆ. ದರ್ಶನ್ ಜೈಲಿನಿಂದ ಹೊರ ಬಂದು ಪೊಲೀಸ್ ವಾಹನ ಏರಿ ಕೋರ್ಟ್‌ಗೆ ಆಗಮಿಸಿರುವ ಫೋಟೊ, ವೀಡಿಯೋ ವೈರಲ್ ಆಗ್ತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

