Breaking News

ದರೋಡೆಗೆ ಇಳಿದಿದೆ ಲಗ್ನ ಪತ್ರಿಕೆ ಗ್ಯಾಂಗ್, ಮದುವೆ ಆಹ್ವಾನ ಕೊಡೋ ನೆಪದಲ್ಲಿ ಮನಗೆ ನುಗ್ಗಿ ಕಳ್ಳತನ

ಪರಿಚಯ ಇಲ್ಲದವರು ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬಂದರೆ ಎಚ್ಚರ. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ನೆರಳೂರಿನಲ್ಲಿ ಲಗ್ನ ಪತ್ರಿಕೆ ಗ್ಯಾಂಗ್ ಪ್ರಕರಣ ಬೆಳಕಿಗೆ ಬಂದಿದೆ. ನೆರಳೂರು ನಿವಾಸಿ ರವಿಕುಮಾರ್, ನಾಗವೇಣಿ ದಂಪತಿ ಮನೆಯಲ್ಲಿ ಕಳ್ಳರು ಹೊಸ ತಂತ್ರದ ಮೂಲಕ ದರೋಡೆ ಮಾಡಿದ್ದಾರೆ. ಒಬ್ಬಂಟಿ ಮಹಿಳೆಯರು, ಮನೆಯಲ್ಲಿ ಪತಿ ಕೆಲಸಕ್ಕೆ ಹೋಗಿರುವ ವೇಳೆ, ಮನೆಯಲ್ಲಿ ಮಹಿಳೆಯರೇ ಇರುವಾಗ ಈ ಗ್ಯಾಂಗ್ ಮದುವೆ ಆಮಂತ್ರಣ ಪತ್ರಿಕೆ ಹಿಡಿದು ಪ್ರತ್ಯಕ್ಷವಾಗುತ್ತೆ. ಹೀಗೆ ರವಿಕುಮಾರ್ ಕೆಲಸಕ್ಕೆ ಹೋಗಿದ್ದ ವೇಳೆ ಮದುವೆ ಆಮಂತ್ರಣ ಕೊಟ್ಟು ನಾಗವೇಣಿಯನ್ನು ಕಟ್ಟಿ ಹಾಕಿ ಕಳ್ಳತನ ಮಾಡಿದೆ.ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಅಡಿಷನಲ್ ಎಸ್ಪಿ ವೆಂಕಟೇಶ್ ಪ್ರಸನ್ನ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *