Breaking News

ಬೆಂಗಳೂರು| ಸೈಬರ್ ವಂಚನೆ: ₹ 5 ಲಕ್ಷ ಕಳೆದುಕೊಂಡ ಕಾನ್‌ಸ್ಟೆಬಲ್.

ಎಸ್‌ಬಿಐ ಬ್ಯಾಂಕ್ ಹೆಸರಲ್ಲಿ ವಾಟ್ಸ್‌ಆಯಪ್‌ ಗ್ರೂಪ್‌ವೊಂದನ್ನು ಸೃಷ್ಟಿಸಿ, ಅದಕ್ಕೆ ಶಬೀರ್‌ ಅವರ ಮೊಬೈಲ್‌ ಸಂಖ್ಯೆಯನ್ನು ಆರೋಪಿಗಳು ಸೇರಿಸಿದ್ದರು.ಸ್ವಲ್ಪ ಸಮಯದ ಬಳಿಕ ಎಪಿಕೆ ಫೈಲ್ ಅನ್ನು ಕಳುಹಿಸಿ, ‘ಈ ದಿನ ನಿಮ್ಮ ಖಾತೆಯನ್ನು ಅಪ್‌ಡೇಟ್ (ಕೆವೈಸಿ) ಮಾಡಿಕೊಳ್ಳಿ. ಇಲ್ಲವಾದಲ್ಲಿ ನಿಮ್ಮ ಬ್ಯಾಂಕ್‌ ಖಾತೆಯನ್ನು ನಿಷ್ಕ್ರಿಯಗೊಳಿಸಲಾಗುತ್ತದೆ’ ಎಂದು ಸಂದೇಶ ಕಳುಹಿಸಿದ್ದರು. ಹೀಗಾಗಿ ಅವರು ಎಪಿಕ್‌ ಫೈಲ್‌ ತೆರೆದು ಕೆವೈಸಿಗೆ ಸಂಬಂಧಿಸಿದ ಮಾಹಿತಿಗಳು, ಆಧಾರ್ ಕಾರ್ಡ್, ಎಟಿಎಂ ನಂಬರ್ ಹಾಗೂ ಪಾನ್ ನಂಬರ್ ಅಪ್‌ಡೇಟ್ ಮಾಡಿದ್ದರು. ಇದಾದ ಸ್ವಲ್ಪ ಸಮಯದ ನಂತರ ಅವರ ಖಾತೆಯಿಂದ ₹5 ಲಕ್ಷ ಕಡಿತವಾಗಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *