Breaking News

ಸಾಗರ | ಬಾಲಕಿಯ ಗರ್ಭಪಾತ ಮಾಡಿದ ಆರೋಪ; ಸರಕಾರಿ ವೈದ್ಯೆ ಸೇರಿ 9 ಮಂದಿಯ ವಿರುದ್ಧ ಪ್ರಕರಣ ದಾಖಲು.

ಬಾಲಕಿಯ ಗರ್ಭಪಾತ ಪ್ರಕರಣದಲ್ಲಿ ಮಧ್ಯವರ್ತಿಗಳಾಗಿದ್ದ ಕುಮಾರ್, ದೂಗೂರು ಪರಮೇಶ್ವರ್ ಅವರ ಮೇಲೂ ದೂರು ದಾಖಲಿಸಲಾಗಿದೆ. ಅಲ್ಲದೇ, ಚಾಂದಿನಿ ಆಸ್ಪತ್ರೆಯ ವೈದ್ಯರೊಬ್ಬರ ಮೇಲೂ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರಿದ್ದು, ಇದುವರೆಗೂ ವೈದ್ಯರು, ಮಧ್ಯವರ್ತಿಗಳನ್ನು ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.ಕೃತ್ಯ ನಡೆದ ಖಾಸಗಿ ಆಸ್ಪತ್ರೆಯ ಪಾತ್ರ ಎಷ್ಟಿದೆ ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ. ನಂತರವಷ್ಟೇ ಆ ಖಾಸಗಿ ಆಸ್ಪತ್ರೆ ಮೇಲೆ ದೂರು ದಾಖಲಿಸುವುದರ ಬಗ್ಗೆ ಕ್ರಮವಹಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.ಸರಕಾರಿ ಪ್ರಸೂತಿ ತಜ್ಞೆ ಡಾ.ಪ್ರತಿಮಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಬಾಲಕಿಯ ಗರ್ಭಪಾತ ಮಾಡಿದ್ದಲ್ಲದೆ ಪೊಕ್ಸೊ ಪ್ರಕರಣವನ್ನು ಪೊಲೀಸರ ಗಮನಕ್ಕೆ ತಾರದ ಹಿನ್ನೆಲೆಯಲ್ಲಿ ಆರೋಪಿಯನ್ನಾಗಿ ದೂರು ದಾಖಲಿಸಿಕೊಳ್ಳಲಾಗಿದೆ ಎಂದರು.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *