Breaking News

ಮಂಗಳೂರು| ವೈಯಕ್ತಿಕ ಸಮಸ್ಯೆಗಳನ್ನು ಪೂಜೆ ಮಾಡಿ ಪರಿಹರಿಸುವುದಾಗಿ ನಂಬಿಸಿ 28.78 ಲಕ್ಷ ರೂ. ವಂಚನೆ; ಆರೋಪಿಯ ಬಂಧನ

ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಸಾರ್ವಜನಿಕರಿಗೆ ವೈಯಕ್ತಿಕ ಸಮಸ್ಯೆಗಳನ್ನು ಶೀಘ್ರ ಪೂಜೆ ಮಾಡಿ ಪರಿಹರಿಸುವುದಾಗಿ ಜಾಹೀರಾತು ನೀಡಿ, ವ್ಯಕ್ತಿಯೊಬ್ಬರಿಗೆ ಸುಮಾರು 24,78,274 ರೂ. ಸೈಬರ್ ವಂಚನೆ ನಡೆಸಿದ ಆರೋಪದಲ್ಲಿ ಯವಂತಪುರದ ವಾಸುವೇವ ಆರ್(32) ಎಂಬಾತನನ್ನು ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ವ್ಯಕ್ತಿಯೊಬ್ಬರು ನೀಡಿದ ದೂರಿನಂತೆ ದಕ್ಷಿಣ ಕನ್ನಡ ಜಿಲ್ಲಾ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ.ಆರೋಪಿಯನ್ನು ನ.5ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *