Breaking News

ಚಿಕ್ಕಮಗಳೂರಲ್ಲಿ ಖಾಸಗಿ ಬಸ್ ಪಲ್ಟಿ : ಪ್ರವಾಸಕ್ಕೆ ಬಂದಿದ್ದ 11 ವಿದ್ಯಾರ್ಥಿಗಳಿಗೆ ಗಾಯ, ಐವರ ಸ್ಥಿತಿ ಚಿಂತಾಜನಕ

ಚಿಕ್ಕಮಗಳೂರಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಪ್ರವಾಸಕ್ಕೆ ಬಂದಿದ್ದ ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಪಲ್ಟಿಯಾಗಿದೆ. ಶೃಂಗೇರಿ ತಾಲೂಕಿನ ಕಾವಡಿಯಲ್ಲಿ ಈ ಒಂದು ಅಪಘಾತ ಸಂಭವಿಸಿದೆ.ಅಪಘಾತದಲ್ಲಿ 11 ವಿದ್ಯಾರ್ಥಿಗಳಿಗೆ ಗಂಭೀರವಾದ ಗಾಯಗಳಾಗಿದ್ದು, ಐವರು ವಿದ್ಯಾರ್ಥಿಗಳ ಸ್ಥಿತಿ ಚಿಂತಾಜನಕವಾಗಿದೆ. ಗಾಯಾಳು ವಿದ್ಯಾರ್ಥಿಗಳನ್ನು ತಕ್ಷಣ ಮಣಿಪಾಲ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಶೃಂಗೇರಿ ಪ್ರವಾಸಕ್ಕೆ ವಿದ್ಯಾರ್ಥಿಗಳ ತಂಡ ಬಂದಿತ್ತು. ಚಿತ್ರದುರ್ಗದ ವಾಸವಿ ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ಬಂದಾಗ ಈ ಅಪಘಾತ ಸಂಭವಿಸಿದೆ.ಬಸ್ ನಲ್ಲಿ ಸುಮಾರು 25ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು ಎಂದು ತಿಳಿದು ಬಂದಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *