Breaking News

ಉಡುಪಿಯ ಕುಂದಾಪುರ ಉಪ ವಿಭಾಗದ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಸಸ್ಪೆಂಡ್

ಅನಧಿಕೃತವಾಗಿ ಕರ್ತವ್ಯಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಕುಂದಾಪುರ ಉಪ ವಿಭಾಗದದ ಉಡುಪಿ ಜಿಲ್ಲೆ ಗ್ರೇಡ್-2 ತಹಶೀಲ್ದಾರ್ ಮಲ್ಲಿಕಾರ್ಜುನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶಿಸಿದೆಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಮಲ್ಲಿಕಾರ್ಜುನ, ತಹಶೀಲ್ದಾರ್ ಗ್ರೇಡ್-2 ಸಹಾಯಕ ಆಯುಕ್ತರ ಕಚೇರಿ, ಕುಂದಾಪುರ ಉಪ ವಿಭಾಗ, ಉಡುಪಿ ಜಿಲ್ಲೆ ಇವರು ದಿನಾಂಕ 10-10-2025ರಿಂದ ಇಲ್ಲಿಯವರೆಗೆ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯದೇ ಕರ್ತವ್ಯಕ್ಕೆ ಅನಧಿಕೃತ ಗೈರು ಹಾಜರಾಗಿ, ದುರ್ನಡತೆ ತೋರಿದ್ದಾರೆ ಎಂದಿದ್ದಾರೆ.ಈ ಹಿನ್ನಲೆಯಲ್ಲಿ ಇಲಾಖಾ ವಿಚಾರಣೆ ಕಾಯ್ದಿರಿಸಿ, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957ರ ನಿಯಮ 10(1)(ಡಿ) ಅಡಿಯಲ್ಲಿ ಅಮಾನತ್ತುಗೊಳಿಸಿ ಆದೇಶಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *