ಹುಬ್ಬಳ್ಳಿ: ಜೈಲಿನಲ್ಲಿ ಉಗ್ರರಿಗೆ ರಾಜಾತಿಥ್ಯ ಕೊಡುವಲ್ಲಿ ಸಚಿವರು, ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದರು.
ಹುಬ್ಬಳ್ಳಿಯಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಖೈದಿಗಳಿಗೆ ರಾಜ್ಯಾತಿಥ್ಯ ಕೊಡಲಾಗ್ತಿದೆ. ಫೋನ್ ಇತ್ಯಾದಿಗಳನ್ನು ಪೂರೈಸಲಾಗ್ತಿದೆ. ಸಿದ್ದರಾಮಯ್ಯ ಸರ್ಕಾರದಲ್ಲಿ ಏನು ಬೇಕಾದರೂ ನಡೆಯುತ್ತದೆ. ಅದರಲ್ಲೂ ಅಲ್ಪಸಂಖ್ಯಾತರ ತುಷ್ಟಿಕರಣ ಹೆಚ್ಚಾಗಿದೆ ಎಂದರು.
ಜೈಲಿನಲ್ಲಿ ಭಯೋತ್ಪಾದಕರಿಗೆ ರಾಜ್ಯಾತಿಥ್ಯ ಕೊಡಲಾಗ್ತಿದೆ. ಆ ಮೂಲಕ ಅಕ್ರಮ ಚಟುವಟಿಕೆಗಳು ನಡೆಯುತ್ತವಂತೆ ಮಾಡಿದ್ದಾರೆ. ಇದರಲ್ಲಿ ಕೆಲ ಸಚಿವರು, ಕೆಲ ಅಧಿಕಾರಿಗಳು ಶಾಮೀಲಾಗಿದ್ದಾರೆ. ಲಷ್ಕರ್ ಉಗ್ರ ಇರಲಿ, ಉಮೇಶ್ ರೆಡ್ಡಿ ಇರಲಿ ರಾಜ್ಯಾತಿಥ್ಯ ಕೈಬಿಡಬೇಕು
ಸರ್ಕಾರ ಈ ಕೂಡಲೇ ಎಚ್ಚರಗೊಂಡು ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹುಬ್ಬಳ್ಳಿಯಲ್ಲಿ ಜಗದೀಶ್ ಶೆಟ್ಟರ್ ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

