Breaking News

ಮಂಗಳೂರು: ಬಹುಕೋಟಿ ವಂಚನೆ ಪ್ರಕರಣದ ಆರೋಪಿಯ ಮನೆ, ಬ್ಯಾಂಕ್ ಖಾತೆ ಸಹಿತ 2.85 ಕೋಟಿ ರೂ. ಮೌಲ್ಯದ ಸೊತ್ತು ಮುಟ್ಟುಗೋಲು.

ಬಹುಕೋಟಿ ವಂಚನೆ ಪ್ರಕರಣದ ಪ್ರಮುಖ ಆರೋಪಿ ರೋಷನ್ ಸಲ್ಡಾನ ಎಂಬಾತನ ಮನೆ ಮತ್ತು ಬ್ಯಾಂಕ್ ಖಾತೆ ಸೇರಿದಂತೆ ಒಟ್ಟು 2.85 ಕೋಟಿ ರೂ. ಆಸ್ತಿಯನ್ನು ಜಾರಿ ನಿರ್ದೇಶನಾಲಯದ (ಈಡಿ) ಮಂಗಳೂರು ಉಪವಲಯ ಕಚೇರಿಯ ಅಧಿಕಾರಿಗಳು, ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ.ಆಗಸ್ಟ್‌ನಲ್ಲಿ ನಡೆಸಿದ ಕಾರ್ಯಾಚರಣೆ ವೇಳೆ ಈಡಿಯು, ಆರೋಪಿಗಳ ಬ್ಯಾಂಕ್ ಖಾತೆ, ಬೋಟ್ ಮತ್ತು ಅವುಗಳ ಎಂಜಿನ್‌ಗಳ ರೂಪದಲ್ಲಿ ಅಂದಾಜು 9.5 ಕೋಟಿ ರೂ. ಮೊತ್ತವನ್ನು ವಶಕ್ಕೆ ಪಡೆದಿದೆ. ಇದರ ಮುಂದುವರಿದ ಭಾಗವಾಗಿ, ರೋಷನ್ ಸಲ್ಡಾನನ 2.14 ರೂ. ಕೋಟಿ ಮೌಲ್ಯದ ಆಸ್ತಿ, ಪಿ.ಎಂ. ಎಂಟರ್ಪ್ರೈಸಸ್ ಬ್ಯಾಂಕ್ ಖಾತೆಯ 70.8 ಲಕ್ಷ ಮೊತ್ತವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ. ತನಿಖೆ ಪ್ರಗತಿಯಲ್ಲಿ ಎಂದು ಈಡಿ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *