ಮಸೀದಿಯೊಂದರಲ್ಲಿ ಕುರಾನ್ ಬೋಧನೆ ಮಾಡುವ ಶಿಕ್ಷಕರಾಗಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಮಾಡಿದ ಸಾಲವನ್ನ ತೀರಿಸಲಾಗದಕ್ಕೆ ಹುಡುಕಿಕೊಂಡಿದ್ದು ಕಳ್ಳತನದ ಮಾರ್ಗ. ಮಸೀದಿಯಲ್ಲಿ ಕುರಾನ್ ಬೋಧನೆ ಮಾಡುತ್ತಾ ಅತ್ತ ಮನೆಗಳಿಗೂ ಕನ್ನ ಹಾಕುತ್ತಿದ್ದ ಖದೀಮನನ್ನು ಕಲಬುರಗಿ ಸಿಟಿ ಪೊಲೀಸರು ಬಲೆಗೆ ಕೆಡವಿದ್ದಾರೆ.ಮಹ್ಮದ್ ಆರೀಫ್ ಅಲಿ ಬಂಧಿತ ಶಿಕ್ಷಕ. ವಿಶ್ವವಿದ್ಯಾಲಯ ಠಾಣಾ ಪೊಲೀಸರು ಬಂಧಿತನಿಂದ 100 ಗ್ರಾಂ ಚಿನ್ನಾಭರಣ, 16 ಸಾವಿರ ರೂ ಮೌಲ್ಯದ ಬೆಳ್ಳಿ, ಬೈಕ್ ಸೇರಿದಂತೆ 13.41 ಲಕ್ಷ ರೂ ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

