ಬ್ರಹ್ಮಾವರ ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಹಿಂದುಳಿದ ವರ್ಗ ಹಾಸ್ಟೆಲ್‌ನಿಂದ ನಾಪತ್ತೆಯಾಗಿರುವ ಮೂವರು ವಿದ್ಯಾರ್ಥಿನಿಯರನ್ನು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.ಹಾಸ್ಟೆಲ್‌ನಲ್ಲಿದ್ದ ಬ್ರಹ್ಮಾವರ ಬೋರ್ಡ್ ಹೈಸ್ಕೂಲ್‌ನ 6, 7, 8ನೇ ತರಗತಿಯ ವಿದ್ಯಾರ್ಥಿನಿಯರು ಶನಿವಾರ ಸಂಜೆ 4ಗಂಟೆ ಸುಮಾರಿಗೆ ನಾಪತ್ತೆಯಾಗಿದ್ದರು.ಈ ಬಗ್ಗೆ ಹಾಸ್ಟೆಲ್ ವಾರ್ಡನ್ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದು, ಅದರಂತೆ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಅಶೋಕ್ ಮಳಬಗಿ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ, ನಾಪತ್ತೆಯಾಗಿದ್ದ ಮಕ್ಕಳನ್ನು ರಾತ್ರಿ 8ಗಂಟೆ ಸುಮಾರಿಗೆ ಮಂಗಳೂರು ಬಿ.ಸಿ.ರೋಡ್ ಬಳಿ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಉತ್ತರ ಕರ್ನಾಟಕ ಮೂಲದ ಈ ಮೂವರು ಬೆಂಗಳೂರು ಕಡೆ ಹೋಗುವ ಬಸ್ ಹತ್ತಿದ್ದರೆನ್ನಲಾಗಿದೆ. ಇದೀಗ ಮಕ್ಕಳನ್ನು ವಾಪಾಸ್ಸು ಬ್ರಹ್ಮಾವರಕ್ಕೆ ಕರೆದುಕೊಂಡು ಬರಲಾಗುತ್ತಿದೆ ಎನ್ನಲಾಗಿದೆ. ಪೊಲೀಸರ ಈ ಕ್ಷಿಪ್ರ ಕಾರ್ಯಾಚರಣೆಗೆ ಎಲ್ಲಡೆ ಮೆಚ್ಚುಗೆ ವ್ಯಕ್ತವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

