Breaking News

ಬೈಕ್‌ ಡಿಕ್ಕಿ.. ರಸ್ತೆಗೆ ಬಿದ್ದ ವೃದ್ಧೆ ಮೇಲೆ ಹರಿದ ಕಾರು | ಸ್ಥಳದಲ್ಲೇ ಸಾವು

ಬೈಕ್ ಡಿಕ್ಕಿಯಾಗಿ ರಸ್ತೆಯ ಮೇಲೆ ಬಿದ್ದ ವೃದ್ಧೆಯ ಮೇಲೆ ಹಿಂಬದಿಯಿಂದ ಬಂದ ಕಾರು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆ ಬಳಿ ನಡೆದಿದೆ.ಕೊತ್ತಗೆರೆ ಗ್ರಾಮದ ಗಂಗಮ್ಮ (49) ಮೃತ ಮಹಿಳೆ. ಗಂಗಮ್ಮ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್ ಗುದ್ದಿದ ಪರಿಣಾಮ ಗಂಗಮ್ಮ ರಸ್ತೆ ಮೇಲೆ ಬಿದ್ದಿದ್ದಾರೆ.ಈ ವೇಳೆ ಹಿಂದಿನಿಂದ ಬಂದ ಕಾರು ಗಂಗಮ್ಮ ಮೇಲೆ ಹರಿದು ಈ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಈ ಘಟನಾ ಸಂಬಂಧ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಕೊಲ್ಲೂರಿನಲ್ಲಿ 80 ಸಾವಿರ ರೂ. ಕಳವು: 24 ಗಂಟೆಯೊಳಗೆ ಮೂವರು ಕಳ್ಳಿಯರ ಬಂಧನ

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ಭಕ್ತೆಯ ವ್ಯಾನಿಟಿ ಬ್ಯಾಗ್‌ನಿಂದ ₹80 ಸಾವಿರ ನಗದು ಕಳವು ಮಾಡಿದ ಪ್ರಕರಣವನ್ನು ಕೊಲ್ಲೂರು …

Leave a Reply

Your email address will not be published. Required fields are marked *