Breaking News

ಹಾಸನದಲ್ಲಿ ಘೋರ ದುರಂತ : ಕೆರೆಯಲ್ಲಿ ಈಜಲು ತೆರಳಿದ್ದ ವೇಳೆ ಇಬ್ಬರು ಬಾಲಕರು ನೀರು ಪಾಲು

ಹಾಸನದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಕೆರೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನಿರುಪಾಲಾಗಿ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹುಂಡಿಗನಾಳ ಎಂಬ ಗ್ರಾಮದಲ್ಲಿ ನಡೆದಿದೆ. ಮೃತರನ್ನು ವಿಜಯಕುಮಾರ್ (12) ಹಾಗು ಸುಜನ್ (13) ಎಂದು ತಿಳಿದುಬಂದಿದೆ.ಗ್ರಾಮದ ಕೆರೆಯಲ್ಲಿ ವಿಜಯಕುಮಾರ್ ಸುಜನ್ ಸೇರಿದಂತೆ ಐವರು ಈಜಲು ತೆರಳಿದರು ಈ ವೇಳೆ ವಿಜಯಕುಮಾರ್ ಮತ್ತು ಸುಜನ್ ಕೆರೆಯಲ್ಲಿ ನಿರುಪಾಲಾಗಿ ಮುಳುಗಿ ಸಾವನ್ನಪ್ಪಿದ್ದಾರೆ. ಜಾವಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಘಟನೆ ನಡೆದಿದ್ದು, ಅಗ್ನಿಶಾಮಕ ಸಿಬ್ಬಂದಿಗಳು ಬಾಲಕರ ಮೃತ ದೇಹ ಹೊರ ತೆಗೆದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *