ಬೆಂಗಳೂರು-ಹಾಸನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ, ಬೈಕ್‌ನಲ್ಲಿ ರೈಡ್‌ಗೆಂದು ತೆರಳುತ್ತಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಬೆಂಗಳೂರು ನಗರದ ನಿವಾಸಿಗಳಾದ ಕೇಶವ ಪ್ರಸಾದ್ (21) ಮತ್ತು ಮಯೂರ್ (20) ಮೃತ ಯುವಕರು ಎಂದು ಗುರುತಿಸಲಾಗಿದೆ. ಸ್ನೇಹಿತರಾದ ಇವರಿಬ್ಬರು, ಭಾನುವಾರದ ರಜಾ ದಿನದಂದು ತಮ್ಮ ಬೈಕ್‌ನಲ್ಲಿ ಬೆಂಗಳೂರಿನಿಂದ ಹಾಸನದ ಕಡೆಗೆ ರೈಡ್ ಹೊರಟಿದ್ದರು ಎನ್ನಲಾಗಿದೆ. ಮುಂಜಾನೆಯ ಸಮಯದಲ್ಲಿ, ಅತೀ ವೇಗವಾಗಿ ಚಲಿಸುತ್ತಿದ್ದ ಬೈಕ್, ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ವಿಭಾಜಕಕ್ಕೆ (ಡಿವೈಡರ್) ರಭಸವಾಗಿ ಅಪ್ಪಳಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

