Breaking News

ಭದ್ರಾ ಕಾಲುವೆಗೆ ಕಾರು ಪಲ್ಟಿ: ಇಬ್ಬರು ಸಾವು.

ಚಾಲಕನ ನಿಯಂತ್ರಣ ತಪ್ಪಿ ಕಾರು ಭದ್ರಾ ಕಾಲುವೆಗೆ ಪಲ್ಟಿಯಾಗಿ, ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆ, ಚನ್ನಗಿರಿ ತಾಲೂಕಿನ ಸೂಳೆಕೆರೆ ಬಳಿಯ ಹೊಸೂರಿನಲ್ಲಿ ನಡೆದಿದೆ.ಮೃತರನ್ನು ದಾವಣಗೆರೆಯ ಮೂಲದ ಸಿದ್ದೇಶ್ (38), ಮಲ್ಲಿಕಾರ್ಜುನ್ (27) ಎಂದು ಗುರುತಿಸಲಾಗಿದೆ. ಕಾರಿನಲ್ಲಿ 6 ಜನ ಮಂಗಳೂರು ಬಳಿಯ ಕೊರಗಜ್ಜನ ದೇವಸ್ಥಾನಕ್ಕೆ ಹೋಗಿ ಹಿಂತಿರುಗುವಾಗ ಈ ಅಪಘಾತ ಸಂಭವಿಸಿದೆ. ಚಾಲಕ ನಿದ್ರೆ ಮಂಪರಿನಲ್ಲಿ ಕಾರು ಚಲಾಯಿಸಿದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *