ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (KIA) ಟರ್ಮಿನಲ್ 2 (T2) ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿರುವ ವಿಡಿಯೋ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ.ಭಾನುವಾರ ರಾತ್ರಿ ಟ್ವೀಟ್ ಮಾಡಿರುವ ಅವರು, “ಈ ವ್ಯಕ್ತಿಗಳು ಹೆಚ್ಚಿನ ಭದ್ರತಾ ವಲಯದಲ್ಲಿ ನಮಾಜ್ ಮಾಡಲು ಪೂರ್ವಾನುಮತಿ ಪಡೆದಿದ್ದಾರೆಯೇ?” ಎಂದು ನೇರವಾಗಿ ಪ್ರಶ್ನಿಸಿದ್ದಾರೆ. ಜೊತೆಗೆ, “ಸಂಬಂಧಪಟ್ಟ ಅಧಿಕಾರಿಗಳಿಂದ ಸೂಕ್ತ ಅನುಮತಿ ಪಡೆದ ನಂತರ ಆರ್ಎಸ್ಎಸ್ ಪಾಠ ಸಂಚಾಲನೆ ನಡೆಸಿದಾಗ ಸರ್ಕಾರ ಏಕೆ ಆಕ್ಷೇಪಿಸುತ್ತದೆ, ಆದರೆ ನಿರ್ಬಂಧಿತ ಸಾರ್ವಜನಿಕ ಪ್ರದೇಶದಲ್ಲಿ ಅಂತಹ ಚಟುವಟಿಕೆಗಳಿಗೆ ಕಣ್ಣು ಮುಚ್ಚಿ ಕುಳಿತಿದೆ?” ಎಂದು ಪ್ರಶ್ನಿಸುವ ಮೂಲಕ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಕ್ಷಪಾತದ ಆರೋಪ ಮಾಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

