Breaking News

ಫರಿದಾಬಾದ್‌ನ ಆಸ್ಪತ್ರೆಯಲ್ಲಿ ಪೊಲೀಸರ ಕಾರ್ಯಾಚರಣೆ: 300 ಕೆ.ಜಿ ಆರ್‌ಡಿಎಕ್ಸ್ ವಶ

ಶ್ರೀನಗರ: ರಾಷ್ಟ್ರ ರಾಜಧಾನಿ ವಲಯದಲ್ಲಿರುವ ಫರಿದಾಬಾದ್‌ನ ಆಸ್ಪತ್ರೆಯಲ್ಲಿ ಕಾರ್ಯಾಚರಣೆ ನಡೆಸಿರುವ ಜಮ್ಮು ಮತ್ತು ಕಾಶ್ಮೀರ ಪೊಲೀಸರು 300 ಕೆ.ಜಿ ಆರ್‌ಡಿಎಕ್ಸ್, ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಬಂಧಿತ ಕಾಶ್ಮೀರಿ ವೈದ್ಯ ಡಾ. ಅದೀಲ್ ಅಹ್ಮದ್ ರಾಥರ್ ವಿಚಾರಣೆಯ ವೇಳೆ ನೀಡಿದ ಮಾಹಿತಿಯನ್ನಾಧರಿಸಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಫರಿದಾಬಾದ್‌ನ ಅಲ್ ಫಲಾಹ್ ಆಸ್ಪತ್ರೆಯಲ್ಲಿ ದಾಳಿ ನಡೆಸಿದ್ದಾರೆ. ಈ ವೇಳೆ ಆರ್‌ಡಿಎಕ್ಸ್, ಎಕೆ -47 ರೈಫಲ್ ಮತ್ತು ಮದ್ದುಗುಂಡುಗಳ ಸಂಗ್ರಹ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.ಇದಕ್ಕೂ ಮುನ್ನ, ಭದ್ರತಾ ಪಡೆಗಳು ಕಾಶ್ಮೀರದ ಆಸ್ಪತ್ರೆಯಲ್ಲಿರುವ ಡಾ. ರಾಥರ್ ಅವರಿಗೆ ಸೇರಿದ ಲಾಕರ್‌ನಿಂದ ಎಕೆ-47 ರೈಫಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಂಡಿದ್ದರು.ಫರಿದಾಬಾದ್‌ನಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಲು ಮತ್ತು ಅಡಗಿಸಿಡಲು ಸಹಾಯ ಮಾಡಿದ ಆರೋಪದ ಮೇಲೆ ಪುಲ್ವಾಮಾ ಜಿಲ್ಲೆಯ ಕೊಯಿಲ್ ನಿವಾಸಿ ಡಾ. ಮುಜಾಮಿಲ್ ಶಕೀಲ್ ಎಂಬ ಮತ್ತೊಬ್ಬ ವೈದ್ಯನನ್ನು ಬಂಧಿಸಲಾಗಿದೆ ಎಂದೂ ಅವರು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *