ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ರೌಡಿಶೀಟರ್ ಬಿಕ್ಲು ಶಿವು ಕೊಲೆ ಕೇಸ್ ತನಿಖೆ ಮುಂದುವರಿದಿ ದ್ದು, ಮೇಜರ್ ಅಪ್ಡೇಟ್ ಲಭ್ಯವಾಗಿದೆ.ಮರ್ಡರ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿಯನ್ನು ಸಿಐಡಿ ಪೊಲೀಸರು ಸೋಮವಾರ ಬಂಧಿಸಿದ್ದಾರೆ.ಅಜಿತ್ ಬಂಧಿತ ಆರೋಪಿಯಾಗಿದ್ದಾನೆ. ಕಳೆದ ಅನೇಕ ತಿಂಗಳಿಂದ ತಲೆಮರೆಸಿಕೊಂಡಿದ್ದ ಅಜಿತ್ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಓಡಾಡ್ತಿದ್ದನು. ಅಜಿತ್ ನಿನ್ನೆ ಸೋಮವಾರ ಬೆಳಿಗ್ಗೆ ರಾಮಮೂರ್ತಿನಗರದಲ್ಲಿ ಸ್ನೇಹಿತರ ಜತೆ ಇರೋ ಬಗ್ಗೆ ಮಾಹಿತಿ ಸಿಕ್ಕಿತ್ತು. ಅಲ್ಲಿಗೆ ತೆರಳಿದ ತನಿಖಾ ತಂಡವು ಆರೋಪಿಯನ್ನು ಬಂಧಿಸಿದೆ ಎಂದು ಸಿಐಡಿ ಮೂಲಗಳು ಹೇಳಿವೆ. ಭಾರತೀನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜುಲೈ 15ರಂದು ಬಿಕ್ಲು ಶಿವು ಅವರ ಕೊಲೆ ನಡೆದಿತ್ತು. ಈ ಪ್ರಕರಣದಲ್ಲಿ ಇದುವರೆಗೂ 19 ಆರೋಪಿಗಳನ್ನು ಬಂಧಿಸಲಾಗಿದೆ. ಮತ್ತಷ್ಟು ತೀವ್ರಗತಿಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಇದೇ ಕೊಲೆ ಕೇಸ್ ನಲ್ಲಿ ಮಾಜಿ ಸಚಿವ ಭೈರತಿ ಬಸವರಾಜು ಹೆಸರು ಕೇಳಿಬಂದಿತ್ತು. ಈ ಪ್ರಕರಣ ರಾಜಕೀಯ ಸಂಘರ್ಷಕ್ಕೂ ಸಹ ಕಾರಣವಾಗಿತ್ತು. ಈಗ ಮತ್ತೊಬ್ಬ ಆರೋಪಿ ಬಂಧನವಾಗಿದ್ದು, ಮುಂದಿನ ತನಿಖೆ ಬಗ್ಗೆ ಕುತೂಹಲ ಮನೆಮಾಡಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

