ದೇವದುರ್ಗ: ತಾಲ್ಲೂಕಿನ ಗಬ್ಬೂರು ಪೊಲೀಸ್ ಠಾಣೆಯ ಪಿಎಸ್‌ಐ ಕುಟುಂಬ ಪ್ರಯಾಣಿಸುತ್ತಿದ್ದ ಕಾರು ರಾಯಚೂರು ತಾಲ್ಲೂಕಿನ ಮುರಾನಪುರ ಬಳಿ ಅಪಘಾತಕ್ಕೀಡಾಗಿದ್ದು, ಐವರು ಗಾಯಗೊಂಡಿದ್ದಾರೆ. ಭಾನುವಾರ (ನ.9) ಮಧ್ಯರಾತ್ರಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಪಿಎಸ್‌ಐ ಅರುಣ ಕುಮಾರ ರಾಥೋಡ್ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ.ಅವರ ಪತ್ನಿ, ಇಬ್ಬರು ಮಕ್ಕಳು ಮತ್ತು ಕಾರು ಚಾಲಕನಿಗೆ ಗಾಯಗಳಾಗಿವೆ. ತಡರಾತ್ರಿ ಗಾಯಾಳುಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಮುಂದುವರೆದಿದೆ. ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಸಿಎಂ ಕಾರ್ಯಕ್ರಮದ ಬಂದೊಬಸ್ತ್‌ಗೆ ಪಿಎಸ್‌ಐ ತೆರಳಿದ್ದರು. ವಾಪಸ ಬರುವಾಗ ಕುಟುಂಬದವರೊಂದಿಗೆ ಖಾಸಗಿ ಕಾರಿನಲ್ಲಿ ಬರುವಾಗ ಅಪಘಾತ ನಡೆದಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

