Breaking News

ಮುದಗಲ್: ವಿಚಾರಣೆಗೆ ತೆರಳಿದ್ದ ಪೊಲೀಸರ ಮೇಲೆ ತಾಂಡಾ ನಿವಾಸಿಗಳಿಂದ ಹಲ್ಲೆ.

ತಾಲ್ಲೂಕಿನ ಮಟ್ಟೂರು ತಾಂಡಾಕ್ಕೆ ಪ್ರಕರಣ ಸಂಬಂಧ ಆರೋಪಿಗಳ ವಿಚಾರಣೆಗೆ ಮಂಗಳವಾರ ತೆರಳಿದ್ದ ಪೊಲೀಸರ ಮೇಲೆ ಹಲ್ಲೆ ಮಾಡಲಾಗಿದೆ.ಮಲ್ಲಪ್ಪ ನೀಡಿದ ದೂರಿನ ಮೇರೆ ಆರೋಪಿ ರಾಮಪ್ಪ ಹಾಗೂ ಆತನ ಪತ್ನಿ ಸಕ್ಕುಬಾಯಿ ಅವರ ವಿಚಾರಣೆಗೆ ಎಎಸ್‌ಐ ವೆಂಕಟಪ್ಪ ನಾಯಕ, ಹೆಡ್‌ಕಾನ್‌ಸ್ಟೆಬಲ್‌ ರಾಮಪ್ಪ ಅವರು ತಾಂಡಾಕ್ಕೆ ತೆರಳಿದ್ದರು. ಇದೇ ವೇಳೆ ರಾಮಪ್ಪ ಹಾಗೂ ಪತ್ನಿ ಸಕ್ಕುಬಾಯಿ ಸೇರಿಕೊಂಡು ಕಲ್ಲು, ದೊಣ್ಣೆಯಿಂದ ಹಲ್ಲೆ ಮಾಡಿದ್ದಾರೆ. ಸಮವಸ್ತ್ರ ಹಿಡಿದು ಎಎಸ್‌ಐ ಅವರನ್ನು ಎಳೆದಾಡಿ ಗಾಯಗೊಳಿಸಿದ್ದಾರೆ.

Share News

About BigTv News

Check Also

ಬುದ್ಧಿಮಾಂದ್ಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನಿಗೆ 20 ವರ್ಷ ಜೈಲು!

ರಾಮನಗರ: ವಿಶೇಷಚೇತನ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದ ಇಬ್ಬರು ಆರೋಪಿಗಳಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ 1ನೇ ಅಪರ …

Leave a Reply

Your email address will not be published. Required fields are marked *