Breaking News

ಮನೆಯಲ್ಲಿ 100 ಕೆಜಿ ಗೋಮಾಂಸ ಪತ್ತೆ; ಮಹಿಳೆ ಬಂಧನ; ಇಬ್ಬರು ಪರಾರಿ

ಕಾರ್ಕಳ: ನಲ್ಲೂರಿನ ಮನೆಯೊಂದಕ್ಕೆ ದಾಳಿ ಮಾಡಿದ ಗ್ರಾಮಾಂತರ ಠಾಣೆ ಪೊಲೀಸರು ಅಕ್ರಮವಾಗಿ ಗೋಮಾಂಸ ಶೇಖರಣೆ ಪತ್ತೆ ಮಾಡಿದ್ದಾರೆ. ಮನೆಯಲ್ಲಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದುಇಬ್ಬರು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಖಚಿತ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.ಪತ್ತೆಯಾದ 100 ಕೆಜಿ ದನದ ಮಾಂಸವನ್ನು ವಶಕ್ಕೆ ತೆಗೆದುಕೊಂಡು ಪ್ರಕರಣ ದಾಖಲಿಸಿದ್ದಾರೆ. ಬಂಧಿತ ರುಕ್ಸಾನ ಅವರನ್ನು ಪೊಲೀಸರು ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಾದ ಅಶ್ರಫ್, ಅಫ್ತಾಬ್ ಪರಾರಿಯಾಗಿದ್ದು ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ. ಆರೋಪಿಗಳನ್ನು ಬಂಧಿಸಿ ಆಸ್ತಿ ಮುಟ್ಟುಗೋಲು ಹಾಕುವಂತೆ ಬಜರಂಗದಳ ರಾಜ್ಯ ಮುಖಂಡ ಸುನಿಲ್ ಕೆ. ಆರ್. ಆಗ್ರಹಿಸಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *