ನಗರದ ಮಾಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕೆಲಸಕ್ಕೆಂದು ಮನೆಯಿಂದ ತೆರಳಿ ಬಳಿಕ ನಾಪತ್ತೆಯಾಗಿರುವ ಘಟನೆ ನಡೆದಿದೆ. ಜಪ್ಪು ಸೂಟರ್ ಪೇಟೆಯ ಕುಮಾರ್ ಎಂಬವರ ಪತ್ನಿ ಸುಮಾ ಎನ್.(24) ನಾಪತ್ತೆಯಾದವರು.ಸುಮಾರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪು ಬಣ್ಣದ ಪ್ಯಾಂಟ್, ಕಪ್ಪು ಬಣ್ಣದ ಉದ್ದ ತೋಳಿನ ಅಂಗಿ ಧರಿಸಿದ್ದ ಅವರು ಕನ್ನಡ, ತುಳು, ಹಿಂದಿ ಭಾಷೆ ಮಾತನಾಡುತ್ತಾರೆ ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

