ಡಿಸ್ಕೌಂಟ್ ಆಫರ್ ಆಮಿಷ ತೋರಿಸಿ 300 ಜನರಿಗೆ ಪಂಗನಾಮ ಹಾಕಿದ ಪ್ರಕರಣ ಸಂಬಂಧ ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಭಟ್ಕಳ ಪೊಲೀಸರು ಬಂಧಿಸಿದ್ದಾರೆ.ಎಮ್.ಗಣೇಶನ್ (52), ಸೌತ್ ಸ್ಟ್ರೀಟ್ ರಾಜಾಮಡಂ ನ ತ್ಯಾಗರಾಜನ್ (65) ,ಅನಸಾಲ ಸ್ಟ್ರೀಟ್ ನ ಮೈಯನಾದನ್(42) ಬಂಧಿತ ಆರೋಪಿಗಳು.ಪ್ರಕರಣ ಸಂಬಂಧ ಭಟ್ಕಳ ಸಿಪಿಐ ದಿವಾಕರ್ ನೇತೃತ್ವದಲ್ಲಿ ಪಿಎಸ್‌ಐ ನವೀನ್ ನಾಯ್ಕ್ ನೇತೃತ್ವದ ತಂಡ ಆರೋಪಿಗಳ ಬೆನ್ನುಹತ್ತಿದ್ದರು. ಘಟನೆಯ ನಂತರ ಕೇವಲ ಒಂದು ವಾರದೊಳಗೆ ಭಟ್ಕಳ ಪೊಲೀಸರು ಎಲ್ಲ ಆರೋಪಿಗಳನ್ನು ಬಂಧಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

