Breaking News

ದೆಹಲಿಯಲ್ಲಿ ಮತ್ತೊಂದು ಭೀಕರ ಸ್ಫೋಟ: ರ್ಯಾಡಿಸನ್ ಹೋಟೆಲ್ ಬಳಿ ಘಟನೆ

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ.ದೆಹಲಿಯ ಮಹಿಪಾಲ್ಪುರದ ರ್ಯಾಡಿಸನ್ ಹೋಟೆಲ್ ಬಳಿ ಭಾರಿ ಸ್ಫೋಟ ಸಂಭವಿಸಿದೆ.ಇಂದು ಬೆಳಿಗ್ಗೆ 9:18ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ಅಗ್ನಿ ಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಸ್ಥಳದಲ್ಲಿ ಬೀಡು ಬಿಟ್ಟಿರುವ ಪೊಲೀಸರು ತನಿಖೆ ನಡೆಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *