Breaking News

ದೆಹಲಿಯಲ್ಲಿ ಮತ್ತೊಂದು ಸ್ಫೋಟದ ಶಬ್ಧ..!!

ಕೆಂಪು ಕೋಟೆ ಸ್ಫೋಟದ ಆಘಾತದಿಂದ ಇನ್ನೂ ದೆಹಲಿಯಲ್ಲಿ ಭೀತಿ ಕಡಿಮೆಯಾಗುವಷ್ಟರಲ್ಲಿ ಇದೀಗ ಮತ್ತೊಂದು ಸ್ಪೋಟದ ಶಬ್ಧ ಕೇಳಿಬಂದಿದೆ. ಇಂದು ಬೆಳ್ಳಂಬೆಳಗ್ಗೆ ಮತ್ತೊಂದು ಸ್ಫೋಟದ ಶಬ್ದ ಇಡೀ ರಾಜಧಾನಿಯನ್ನು ನಡುಗಿಸಿದೆ. ಗುರುವಾರ ಬೆಳಿಗ್ಗೆ 9:18 ಸುಮಾರಿಗೆ ಮಹಿಪಾಲ್ಪುರದ ರಾಡಿಸನ್ ಹೋಟೆಲ್ ಬಳಿ ಭಯಂಕರ ಸ್ಫೋಟದ ಶಬ್ದ ಕೇಳಿಸಿದೆ.ಅಗ್ನಿಶಾಮಕ ದಳಕ್ಕೆ ತಕ್ಷಣ ಕರೆ ಬಂದಿದ್ದು, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿವೆ. ಈ ಘಟನೆ ಕೇವಲ ಮೂರು ದಿನಗಳ ಹಿಂದೆ ನಡೆದ ಕೆಂಪು ಕೋಟೆ ಸ್ಫೋಟದ ನಂತರ ಸಂಭವಿಸಿರುವುದು ಆತಂಕ ಹೆಚ್ಚಿಸಿದೆ. ನವೆಂಬರ್ 10ರಂದು ಕೆಂಪು ಕೋಟೆಯ ಹೊರಗೆ ನಡೆದ ಭೀಕರ ಕಾರು ಬಾಂಬ್ ಸ್ಫೋಟದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದರು. ಡಜನ್ಗಟ್ಟಲೆ ಜನರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಮತ್ತಷ್ಟು ಆತಂಕ ಹೆಚ್ಚಿಸಿದೆ. ಕೆಂಪು ಕೋಟೆ ಸ್ಫೋಟದ ನಂತರ ದೆಹಲಿ ಸಂಪೂರ್ಣ ಹೈ ಅಲರ್ಟ್‌! ಕೆಂಪು ಕೋಟೆ ಸ್ಫೋಟದ ನಂತರ ದೆಹಲಿ ಸಂಪೂರ್ಣ ಹೈ ಅಲರ್ಟ್‌ನಲ್ಲಿದೆ. ಎಲ್ಲ ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿಗಾ ವಹಿಸಲಾಗುತ್ತಿದೆ. ಆದರೂ ಮತ್ತೊಂದು ಸ್ಫೋಟದ ಶಬ್ದ ಕೇಳಿಸಿರುವುದು ಭದ್ರತಾ ವ್ಯವಸ್ಥೆಯ ಮೇಲೆ ಪ್ರಶ್ನೆಗಳನ್ನು ಎತ್ತಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *