Breaking News

ಕುಡಿಯುವ ನೀರಿನ ಸಮಸ್ಯೆ: ಎಲ್ ಆ್ಯಂಡ್ ಟಿ ಅಧಿಕಾರಿಗಳ ಚಳಿ ಬಿಡಿಸಿದ ಪಾಲಿಕೆ ಸದಸ್ಯರು…

ಹುಬ್ಬಳ್ಳಿ: 24×7 ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ಕಾಮಗಾರಿ ಗುತ್ತಿಗೆ ಪಡೆದ ಎಲ್ ಆ್ಯಂಡ್ ಟಿ ಸಂಸ್ಥೆಯು ಒಂದಿಲ್ಲೊಂದು ನ್ಯೂನತೆಗಳಿಂದ ಸುದ್ಧಿಯಾಗುತ್ತಲೇ ಇದೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಂಡಿದ್ದು, ಈ ನಿಟ್ಟಿನಲ್ಲಿ ಪಾಲಿಕೆಯ ಸಭೆಯಲ್ಲಿ ಚುನಾಯಿತ ಸದಸ್ಯರು ಎಲ್ ಆ್ಯಂಡ್ ಟಿ ಕಂಪನಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಸಭಾಭವನದಲ್ಲಿ ನಡೆದ ಅವಳಿ ನಗರದ ನೀರಿನ ಸಮಸ್ಯೆ ಬಗ್ಗೆ ಕೆಯುಐಡಿಎಫ್‌ಸಿ ಹಾಗೂ ಎಲ್ ಆ್ಯಂಡ್ ಟಿ ಕಂಪನಿಯ ಅಸಮರ್ಪಕ ನಿರ್ವಹಣೆ ಬಗ್ಗೆ ಪಾಲಿಕೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರಾದ ಎಂ.ಎಂ.ಭದ್ರಾಪೂರ ಅವರು, L&T ಅಧಿಕಾರಿಗಳ ವಿರುದ್ಧ ಹರಿಹಾಯ್ದರು. ವಾರ್ಡ್ ಗಳಲ್ಲಿ ಅಲ್ಲಲ್ಲಿ ನೀರಿನ ಪೈಪ್ ಅಳವಡಿಕೆ ನೆಪದಲ್ಲಿ ರಸ್ತೆ ಹಾಳುಮಾಡಿ ಹಾಗೆ ಬಿಟ್ಟಿದ್ದಾರೆ ಎಂದು ಪಾಲಿಕೆ ಸದಸ್ಯರು ಆರೋಪಿಸಿದರು. ಅದಲ್ಲದೆ ಅವಳಿ ನಗರಕ್ಕೆ ಪ್ರತಿ ಮೂರು ದಿನಕ್ಕೆ ನೀರು ಸರಬರಾಜು ಮಾಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಅವಳಿನಗರದಲ್ಲಿ ನೀರಿನ ದೂರುಗಳಿಗೆ ಸ್ಪಂದಿಸಿದ ಮೇಯರ್ ಎಲ್ ಆ್ಯಂಡ್ ಟಿಗೆ ನಿಗದಿತ ಸಮಯಾವಕಾಶ ನೀಡಿ, ಶೀಘ್ರದಲ್ಲೇ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ನಿರ್ದೇಶಿಸಲಾಯಿತು.

Share News

About Shaikh BigTv

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *