Breaking News

EPFO ಸೊಸೈಟಿಯಲ್ಲಿ 70 ಕೋಟಿ ವಂಚನೆ ಪ್ರಕರಣ: ಅಕೌಂಟೆಂಟ್ ಮನೆ ಮೇಲೆ ಪೊಲೀಸರ ದಾಳಿ

ಇಪಿಎಫ್ ಒ ಸೊಸೈಟಿಯಲ್ಲಿ 70 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಸೊಸೈಟಿಯ ಅಕೌಂಟೆಂಟ್ ಜಗದೀಶ್ ಮನೆ ಮೇಲೆ ದಾಳಿ ನಡೆಸಿದ್ದಾರೆ.ಇಪಿಎಫ್ ಒ ಸೊಸೈಟಿ ಅಕೌಂಟೆಂಟ್ ಆಗಿದ್ದ ಜಗದೀಶ್ ಅವರ ಬೆಂಗಳೂರಿನ ಅಂಜನಾಪುರದಲ್ಲಿರುವ ನಿವಾಸದ ಮೇಲೆ ದಾಳಿ ನಡೆಸಲಾಗಿದ್ದು, ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.21 ಸಾವಿರ ಸಂಬಳ ಪಡೆಯುತ್ತಿದ್ದ ಅಕೌಂಟೆಂಟ್ ಜಗದೀಶ್, 5 ಕೋಟಿ ರೂ ಮನೆ ನಿರ್ಮಿಸಿದ್ದಾರೆ. ಅಲ್ಲದೇ ಬೆಂಗಳೂರಿನ ದಕ್ಷಿಣ ಜಿಲ್ಲೆಯ ಹಲವೆಡೆ ಆಸ್ತಿ ಖರೀದಿ ಮಾಡಿದ್ದಾರೆ ಎಂಬುದು ದಾಳಿ ವೇಳೆ ಪತ್ತೆಯಾಗಿದೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *