ಮೇಕೆದಾಟು ಯೋಜನೇ ಸಂಬಂಧ ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ನಲ್ಲಿ ಗೆಲುವು ಸಿಕ್ಕಿದೆ. ತಮಿಳುನಾಡು ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇದೀಗ ವಜಾಗೊಳಿಸಿದೆ.ಮೇಕೆದಾಟು ಯೋಜನೆ ಇನ್ನು ಆರಂಭಿಕ ಹಂತದಲ್ಲಿ ಇದೆ. ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಮಧ್ಯಪ್ರವೇಶ ಮಾಡಲ್ಲ ಎಂದು ಸುಪ್ರೀಂಕೋರ್ಟ್ ತಮಿಳುನಾಡು ಸಲ್ಲಿಸಿದ್ದ ಪರಿಟ್ ಅರ್ಜಿ ವಜಾ ಗೊಳಿಸಿ ಆದೇಶ ಹೊರಡಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

