ಸ್ಕೂಟರ್ ನಲ್ಲಿದ್ದವರು ಹಾರ್ನ್ ಮಾಡಿದ್ದಾರೆ ಎಂಬ ಕಾರಣಕ್ಕೆ ಕಾರಿನಲ್ಲಿದ್ದ ಯುವಕನೊಬ್ಬ ಸ್ಕೂಟರ್ ನ್ನು ಪಾಲೋ ಮಾಡಿ ಅದಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಿಸಿಟಿವಿ ಆದಾರದ ಮೇಲೆ ಆರೋಪಿ ಕಾರಿನ ಚಾಲಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತನನ್ನು ಕೊಡಿಗೇಹಳ್ಳಿ ನಿವಾಸಿ ಸುಕೃತ್ ಗೌಡ ಎಂದು ಗುರುತಿಸಲಾಗಿದ್ದು, ಈತ ವೈಟ್‌ಫೀಲ್ಡ್‌ನಲ್ಲಿರುವ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ ಅಂಕಿತಾ ಪಟೇಲ್ (31), ತಮ್ಮ ಪತಿ ವಿನೀತ್ ಎ (33) ಮತ್ತು ಅವರ ಮಗ ಗಾಯಗೊಂಡವರು. ದಂಪತಿ ಸದಾಶಿವನಗರ ಪೊಲೀಸ್ ಠಾಣೆ ಜಂಕ್ಷನ್ ಕಡೆಗೆ ತಮ್ಮ ಸ್ಕೂಟರ್‌ನಲ್ಲಿ ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

