ಬುಲೆಟ್ ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮೃತಪಟ್ಟ ಘಟನೆ ಉತ್ತರಕನ್ನಡ ಜಿಲ್ಲೆಯ ಕಾರವಾರ ನಗರದ ಆರ್‌ಟಿಒ ಕಚೇರಿ ಬಳಿ ನಡೆದಿದೆ.ಚಿರಂಜೀವಿ ಬ್ರಹ್ಮಾನಂದ ಕುಂಜಿ(15) ಮೃತ ದುರ್ದೈವಿ. ಮೂಲತಃ ಯಲ್ಲಾಪುರ ತಾಲೂಕಿನ ಇಡಗುಂದಿ ನಿವಾಸಿಗಳು.ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಬುಲೆಟ್ ಬೈಕ್ ರಭಸವಾಗಿ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಚಿರಂಜೀವ ತಲೆ ರಸ್ತೆಗೆ ಬಡಿದದ್ದರಿಂದ ತೀವ್ರ ರಕ್ತಸ್ರಾವದೊಂದಿಗೆ ಸ್ಥಳದಲ್ಲಿಯೇ ದಾರುಣವಾಗಿ ಮೃತಪಟ್ಟಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

