ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಕ್ಯಾಂಟಿನ್‌ನಲ್ಲಿ ಕೆಲಸಗಾರ ಚೇತನ್‌ನನ್ನು ಐದು ವರ್ಷಗಳ ಹಿಂದೆ ಹತ್ಯೆಗೈದ ಪ್ರಕರಣದಲ್ಲಿ ಆರೋಪಿಯಾಗಿದ್ದ ಚಿದಾನಂದ ಪರಶುನಾಯ್ಕರ್ ಎಂಬವನಿಗೆ ನಗರದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಸಜೆ ವಿಧಿಸಿದೆ.ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಬಿ.ಎಸ್.ದಿನೇಶ ಕುಮಾರ ಮತ್ತು ತನಿಖಾ ಸಹಾಯಕರಾದ ಕಾಂತಪ್ಪ ಸುಮಾರು 40 ಸಾಕ್ಷಿದಾರರನ್ನು ವಿಚಾರಿಸಿ ಹಾಗೂ ಇತರ ಸಾಕ್ಷ್ಯಗಳನ್ನು ಸಂಗ್ರಹಿಸಿ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

