Breaking News

ಸೈಬರ್ ಕ್ರೈಂ ಮಾಡಿ ಹಣ ವಂಚನೆ: ಬೆಳಗಾವಿ ಪೊಲೀಸರ ಭರ್ಜರಿ ಭೇಟೆ- 33 ಆರೋಪಿಗಳ ಬಂಧನ

ಬೆಳಗಾವಿಯಲ್ಲೇ ಕುಳಿತು ಅಮೆರಿಕದ ನಾಗರಿಕರನ್ನು ‘ಡಿಜಿಟಲ್‌ ಅರೆಸ್ಟ್‌’ ಮಾಡುತ್ತಿದ್ದ ಅಂತರರಾಷ್ಟ್ರೀಯ ಮಟ್ಟದ ಪ್ರಕರಣವನ್ನು ನಗರದ ಪೊಲೀಸರು ಗುರುವಾರ ಭೇದಿಸಿದ್ದಾರೆ. ವಿವಿಧ ರಾಜ್ಯಗಳ 33 ಆರೋಪಿಗಳನ್ನು ಬಂಧಿಸಿದ್ದು, 37 ಹೈಟೆಕ್‌ ಲ್ಯಾಪ್‌ಟಾಪ್‌, 37 ಮೊಬೈಲ್‌ ಫೋನ್‌ ವಶಕ್ಕೆ ಪಡೆದಿದ್ದಾರೆ.ನಗರದ ಬಾಕ್ಸೈಟ್‌ ರಸ್ತೆಯಲ್ಲಿರುವ ಕುಮಾರ್‌ ಹಾಲ್‌ನಲ್ಲಿ ‘ಅಂತರರಾಷ್ಟ್ರೀಯ ಕಾಲ್‌ ಸೆಂಟರ್‌’ ತೆರೆಯಲಾಗಿತ್ತು. ಇಲ್ಲಿ ಕೆಲಸಕ್ಕೆಂದು ಹಲವರನ್ನು ನೇಮಕ ಮಾಡಿಕೊಂಡಿದ್ದರು. ಅವರಿಗೆ ಪ್ರತಿ ತಿಂಗಳು ಕನಿಷ್ಠ ₹18 ಸಾವಿರದಿಂದ ₹45 ಸಾವಿರದವರೆಗೆ ಸಂಬಳ ಇತ್ತು. ಉಚಿತ ಊಟ, ವಸತಿ ಒದಗಿಸಲಾಗಿತ್ತು. ಇದರ ಚಟುವಟಿಕೆಗಳ ಬಗ್ಗೆ ಅನುಮಾನ ಬಂದ ನಾಗರಿಕರೊಬ್ಬರು ನಗರ ಪೊಲೀಸ್‌ ಕಮಿಷನರ್‌ಗೆ ಪತ್ರ ಬರೆದಿದ್ದರು. ಅನಾಮಧೇಯ ಪತ್ರ ಆಧರಿಸಿ ಪೊಲೀಸರು ದಾಳಿ ನಡೆಸಿದಾಗ, ಈ ದೊಡ್ಡ ಅಪರಾಧ ಜಾಲ ಪತ್ತೆಯಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *